Andolana originals

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಏಕೆಂದರೆ ಅರಣ್ಯಾಧಿಕಾರಿಗಳ ಹೇಳಿಕೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ.

ಮೃತರ ಕುಟುಂಬದ ಸದಸ್ಯರ ಹೇಳಿಕೆಗಳಲ್ಲೂ ಗೊಂದಲ ಇದೆ. ಈ ಎಲ್ಲದಕ್ಕಿಂತ ಹೆಚ್ಚಾಗಿ ಪ್ರಕರಣದಲ್ಲಿ ಗಾಯಗೊಂಡು, ಚಿಕಿತ್ಸೆ ನಂತರ ಅಜ್ಞಾತ ಸ್ಥಳ ಸೇರಿರುವ ಮಹಿಮದಾಸ್ ಅವರ ನಡೆ, ನುಡಿ ಪ್ರಕರಣವನ್ನು ಗೊಂದಲದ ಗೂಡಾಗಿಸಿದೆ.

ಮಹಿಮದಾಸ್ ಅವರು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಅರಣ್ಯ ಇಲಾಖೆಯಿಂದ ಸಾಕ್ಷಿಯಾಗುವಂತೆ ಒತ್ತಡ ಇದೆ ಎಂದು ಹೇಳಿರುವುದು ಪ್ರಕರಣದ ನಿಜಾಂಶವನ್ನು ಕತ್ತಲಲ್ಲಿ ಇಟ್ಟಂತಾಗಿದೆ. ಮಹಿಮದಾಸ್ ಅವರಿಗೆ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯ. ಅವರಿಗೆ ರಕ್ಷಣೆ ದೊರೆತರೆ ಬಹುಶಃ ಸತ್ಯ ಬಯಲಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಸೂಕ್ತ ಕ್ರಮವಹಿಸಬೇಕು.

-ಎಸ್.ಎಂ.ಲಾವಣ್ಯ, ಸರಸ್ವತಿಪುರಂ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

11 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

11 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

12 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

12 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago