Andolana originals

ಓದುಗರ ಪತ್ರ: ಖಾಸಗಿ ಹೋಟೆಲ್‌ನಿಂದ ಮುಖ್ಯ ರಸ್ತೆಯ ಅತಿಕ್ರಮಣ

ಮೈಸೂರಿನ ಲಿಂಗದೇವರ ಕೊಪ್ಪಲಿನ ಬಳಿ ಇರುವ ಒಂದು ಖಾಸಗಿ ಹೋಟೆಲ್ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಹೋಟೆಲಿಗೆ ಬರುವ ಗ್ರಾಹಕರು ರಸ್ತೆಗೆ ಅಂಟಿಕೊಂಡಂತೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹಾಗೂ ರಸ್ತೆ ಬದಿಯಲ್ಲಿ ತಿರುಗಾಡುವ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.

ಈ ರಸ್ತೆಯಲ್ಲೇ ಶಾಪಿಂಗ್ ಮಾಲ್ ಇರುವುದರಿಂದ ಅಲ್ಲಿಗೆ ಬರುವ ಗ್ರಾಹಕರು, ಅಲ್ಲೇ ಅಕ್ಕಪಕ್ಕದಲ್ಲಿರುವ ಕಾರ್ಖಾನೆಗಳಿಗೆ ಬರುವ ಉದ್ಯೋಗಿಗಳೂ ತೊಂದರೆಗೆ ಒಳಗಾಗಿದ್ದಾರೆ. ಮೈಸೂರು, ಮಡಿಕೇರಿ, ಹಾಸನ, ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು ಇದೇ ಮಾರ್ಗವಾಗಿ ಸಂಚರಿಸುವುದರಿಂದ ಬೆಳಗಿನ ಸಮಯ ಹಾಗೂ ಸಂಜೆಯ ಸಮಯದಲ್ಲಿ ವಾಹನಗಳ ದಟ್ಟಣೆ ಆ ರಸ್ತೆಯಲ್ಲಿ ಅತಿ ಹೆಚ್ಚಾಗಿರುತ್ತದೆ.

ಜನ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯ ಅತಿಕ್ರಮಣ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.

 

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

11 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

12 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

12 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

13 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

13 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

16 hours ago