ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ೨೦೨೫ರ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಅತ್ಯಂತ ಸಂತೋಷದ ಸಂಗತಿ. ಆರ್‌ಸಿಬಿ ಕಪ್ ಗೆಲ್ಲುವ ಮೂಲಕ ೧೮ ವರ್ಷಗಳ ವನವಾಸ ಅಂತ್ಯಗೊಂಡಿದೆ. ಈ ಬಾರಿ ಆರ್‌ಸಿಬಿ ತಂಡ ಸಮತೋಲನದಿಂದ ಕೂಡಿದ್ದು, ಈ ಗೆಲುವಿನ ಮೂಲಕ ವಿರಾಟ್ ಕೊಹ್ಲಿ ಕನಸು ಸಾಕಾರಗೊಂಡಿದೆ. ರಜತ್ ಪಾಟಿದಾರ್ ನಾಯಕತ್ವದ ಹೊಣೆಯನ್ನು ಉತ್ತಮವಾಗಿ ನಿರ್ವಹಿಸಿದರು. ಎದೆಗುಂದದೇ ಚಾಣಾಕ್ಷತನದಿಂದ ಬೌಲಿಂಗ್ ಬದಲಾವಣೆ ಮಾಡುತ್ತಾ, ಎದುರಾಳಿಗಳನ್ನು ಕಟ್ಟಿ ಹಾಕಿದರು. ಆರ್‌ಸಿಬಿ ಚಾಂಪಿಯನ್ ಆಗಿ ಅಭಿಮಾನಿಗಳ ಹಲವು ವರ್ಷಗಳ ಕನಸನ್ನು ನನಸು ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು.
-ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು





