ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ.
ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ನಾಯಿಗಳಿಗೆ ಸಂತಾನಹರಣ ಶಸ ಚಿಕಿತ್ಸೆಯನ್ನು ನಡೆಸಲಾಗುತ್ತಿಲ್ಲ. ಆದ್ದರಿಂದ ಬೀದಿ ನಾಯಿಗಳ ಉಪಟಳ ವಿಪರೀತವಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಯಲು ನಮ್ಮ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ, ಕೇರಳದಲ್ಲಿರುವಂತೆ ‘ನಾಯಿಗಳ ಪಾರ್ಕ್’ (ಡಾಗ್ ಪಾರ್ಕ್) ನ್ನು ಮೈಸೂರು ನಗರದಲ್ಲಿ ಸ್ಥಾಪಿಸಿದರೆ ಸ್ವಲ್ಪ ಮಟ್ಟಿಗಾದರೂ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಬಹುದು, ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು





