ಮೈಸೂರು ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೇರೆ ಊರುಗಳಿಂದ ಪ್ರತಿನಿತ್ಯ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಆದರೆ ಆಟೋ ಚಾಲಕರು ಪ್ರಯಾಣಿಕರಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುವ ಮೂಲಕ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ.
ಪಾಠಶಾಲೆ ವೃತ್ತದಿಂದ ರಾಮಸ್ವಾಮಿ ವೃತ್ತಕ್ಕೆ ತೆರಳಲು ೪೦ ರೂ. ದರವಿದ್ದರೂ ಪ್ರಯಾಣಿಕರಿಂದ ೨೦೦ ರೂ. ವಸೂಲಿ ಮಾಡುತ್ತಿದ್ದಾರೆ. ಬನ್ನಿಮಂಟಪದಿಂದ ರಾಮಸ್ವಾಮಿ ವೃತ್ತಕ್ಕೆ ೮೦ ರೂ.ಗಳಿದ್ದರೂ ೧೫೦ ರೂ. ವಸೂಲಿ ಮಾಡುತ್ತಿದ್ದಾರೆ.
ಹೆಚ್ಚು ಹಣವನ್ನು ಏಕೆ ವಸೂಲಿ ಮಾಡುತ್ತಿದ್ದೀರಿ ಎಂದು ಪ್ರಯಾಣಿಕರು ಪ್ರಶ್ನಿಸಿದರೆ ಟ್ರಾಫಿಕ್ ಇರುವುದರಿಂದ ಹೆಚ್ಚು ಹಣ ನೀಡಬೇಕು ಎಂದು ಸಬೂಬು ಹೇಳುತ್ತಾರೆ. ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಽಕಾರಿಗಳು ಪ್ರಯಾಣಿಕರ ಸುಲಿಗೆ ಮಾಡುತ್ತಿರುವ ಆಟೋ ಚಾಲಕರನ್ನು ನಿಯಂತ್ರಿಸುವ ಕೆಲಸ ಮಾಡಬೇಕಾಗಿದೆ.
-ದೀಪಿಕಾ, ಮಳವಳ್ಳಿ




