Mysore
28
broken clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಓದುಗರ ಪತ್ರ: ರೈಲು ಸೇವೆ ವಿಸ್ತರಣೆ ಸ್ವಾಗತಾರ್ಹ

ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ೮ ರೈಲು ಸೇವೆಗಳನ್ನು ವಿಸ್ತರಣೆ ಮಾಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅಶೋಕಪುರಂ ರೈಲ್ವೆ ನಿಲ್ದಾಣದ ಟ್ರ್ಯಾಕ್ ೧ರಿಂದ ೫ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಿದ್ದು, ನೈಋತ್ಯ ರೈಲ್ವೆ ಇಲಾಖೆಯ ಪರಿಶ್ರಮ ಹಾಗೂ ಕಾರ್ಯಕ್ಷಮತೆ ಪ್ರಶಂಸನೀಯವಾಗಿದೆ ಎಂದು ತಿಳಿಸಿದ್ದಾರೆ. ಈ ರೈಲು ಸೇವೆ ವಿಸ್ತರಣೆಯಿಂದ ರೈಲ್ವೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗುವ ಜತೆಗೆ ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಮೇಲಿನ ಒತ್ತಡವನ್ನೂ ಸ್ಪಲ್ಪಮಟ್ಟಿಗಾದರೂ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಕಾರಣರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರಿಗೆ ಧನ್ಯವಾದಗಳು.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.

 

Tags:
error: Content is protected !!