Andolana originals

ಓದುಗರ ಪತ್ರ: ಮೂಲ ಸೌಕರ್ಯ ಕಲ್ಪಿಸಿ

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ.

ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, ರಸ್ತೆ ಗುಂಡಿಬಿದ್ದಿದೆ. ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡವೂ ಶಿಥಿಲಗೊಂಡಿದ್ದು, ಇಂದೋ ನಾಳೆಯೋ ಬೀಳುವ ಅಪಾಯದಲ್ಲಿದೆ.

ಇಷ್ಟಿದ್ದರೂ ಅಲ್ಲಿಯೇ ಅಂಗನವಾಡಿ ಕೇಂದ್ರ ನಡೆಸುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಆತಂಕಪಡುವಂತಾಗಿದೆ. ಇನ್ನು ಗ್ರಾಮದ ವಿದ್ಯುತ್ ಕಂಬಗಳಲ್ಲಿ ಬಲ್ಬ್‌ಗಳೇ ಇಲ್ಲದೆ ರಾತ್ರಿಯಾಗುತ್ತಿದ್ದಂತೆ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಒಳಚರಂಡಿ ವ್ಯವಸ್ಥೆ ಇಲ್ಲದೆ ತ್ಯಾಜ್ಯ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಾಳಜಿ ವಹಿಸಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago