ಓದುಗರ ಪತ್ರ
ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.
ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ
೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…