Andolana originals

ಓದುಗರ ಪತ್ರ: ಮರೆಯಾದ ಹಿರಿಯ ಹಾಸ್ಯ ಕಲಾವಿದ ಉಮೇಶ್

ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. ಪಂತುಲು ನಿರ್ದೇಶಿಸಿದ್ದ ಮಕ್ಕಳ ಪ್ರಧಾನ ಚಿತ್ರವಾದ ‘ಮಕ್ಕಳ ರಾಜ್ಯ’ ಚಿತ್ರದಲ್ಲಿ ಪ್ರಮುಖ ಬಾಲ ನಟನ ಪಾತ್ರ ನಿರ್ವವಹಿಸಿದ್ದ ಉಮೇಶ್ ಅಲ್ಲಿಂದ ಹಿಂತಿರುಗಿ ನೋಡಿದ್ದೇ ಇಲ್ಲ. ಗುಬ್ಬಿ ಕಂಪೆನಿ, ಜಗಜ್ಯೋತಿ ಬಸವೇಶ್ವರ ಕಂಪೆನಿ, ಕೆ.ಹಿರಣ್ಣಯ್ಯ ಮಿತ್ರ ಮಂಡಳಿ ಸೇರಿದಂತೆ ಹಲವಾರು ವೃತ್ತಿ ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದರು.

ಇದನ್ನೂ ಓದಿ :-ಡಿ.16ರಿಂದ ಕೊಡಗಿನಲಿ ಕೈಗ್ ಹಾಕಿ ಪಂದ್ಯಾವಳಿ

೧೯೭೪ರಲ್ಲಿ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಚಿತ್ರದಲ್ಲಿ ಬರುವ ಮುನಿತಾಯಿ ಎಂಬ ಕಿರುಚಿತ್ರದ ಪಾತ್ರಕ್ಕೆ ಅವರಿಗೆ ರಾಜ್ಯ ಸರ್ಕಾರದಿಂದ ಉತ್ತಮ ಪೋಷಕ ಪ್ರಶಸ್ತಿ ದೊರೆತಿದೆ. ಉಮೇಶ್ರವರು ಮುನ್ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಸೀತಾಪತಿ ಸಿಟಿಲೈಫ್ ಧಾರಾವಾಹಿಯಲ್ಲಿ ಅವರ ಹಾಸ್ಯಮಯ ನಟನೆ ಪ್ರೇಕ್ಷಕರ ಮನಸೆಳೆದಿತ್ತು. ಜೀವನದಲ್ಲಿ ಸಾಕಷ್ಟು ನೋವನ್ನು ಅನುಭವಿಸಿದ್ದರೂ ತೆರೆಯ ಮೇಲೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಉಮೇಶ್ ಅವರ ನಿಧನದಿಂದ ಕನ್ನಡ ಚಿತ್ರ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

2 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

2 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

6 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

6 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

6 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

6 hours ago