ಓದುಗರ ಪತ್ರ
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ ಕೋಟ್ಯಂತರ ರೂ. ವಂಚಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಒಂದು ಅಂದಾಜಿನ ಪ್ರಕಾರ ೩೦೦ ಬಸ್ ಗಳಿಗೆ ರಹದಾರಿ ಪಡೆದು ೩,೦೦೦ಕ್ಕೂ ಹೆಚ್ಚು ಬಸ್‌ಗಳನ್ನು ಓಡಿಸುತ್ತಿರುವುದು ನಮ್ಮ ವ್ಯವಸ್ಥೆಯ ಲೋಪಕ್ಕೆ ಹಿಡಿದ ಕನ್ನಡಿಯಾಗಿದೆ. ಸರ್ಕಾರವು ತಕ್ಷಣವೇ ಕಠಿಣ ಕ್ರಮ ಕೈಗೊಂಡು, ಡಿಜಿಟಲ್ ತಪಾಸಣೆಯನ್ನು ಚುರುಕುಗೊಳಿಸಬೇಕು. ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿರುವ ನಕಲಿ ರಹದಾರಿ ದಂಧೆಕೋರರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…
ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…