ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಅತ್ಯಲ್ಪ ಪರಿಹಾರ ಸಿಗುತ್ತದೆ. ಅಧಿಕಾರಿಗಳು ಕೇವಲ ಸಮೀಕ್ಷೆಯ ನಾಟಕವಾಡದೆ, ಅಂಕಿ-ಅಂಶಗಳ ಆಧಾರದ ಮೇಲೆ ತಕ್ಷಣವೇ ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ನ್ಯಾಯ ಒದಗಿಸಬೇಕು. ರೈತರಿಗೆ ಸೂಕ್ತ ಪರಿಹಾರ ನೀಡದೇ ವಂಚಿಸುವ ವಿಮಾ ಕಂಪೆನಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು





