Andolana originals

ಓದುಗರ ಪತ್ರ: ಭ್ರೂಣಹತ್ಯೆ: ಕಠಿಣ ಶಿಕ್ಷೆಯಾಗಲಿ

ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ವರದಿಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೇ ಭಾಗಿಯಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ದುಷ್ಕೃತ್ಯವೆಸಗುತ್ತಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.

ಭ್ರೂಣ ಹತ್ಯೆಯಿಂದಾಗಿ ರಾಜ್ಯದ ಸುಮಾರು ೧೪ ಜಿಲ್ಲೆಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳ ಅನುಪಾತದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿದೆ. ಬಾಗಲಕೋಟೆ, ಬಿಜಾಪುರ, ವಿಜಯ ಪುರ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ, ೧೦೦೦ ಗಂಡು ಮಕ್ಕಳಿಗೆ ಕೇವಲ ೬೨೪ ರಿಂದ ೭೫೦ ಹೆಣ್ಣು ಮಕ್ಕಳಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸವಾಗುತ್ತದೆ.

ಈಗಾಗಲೇ ದಾಖಲಾಗಿರುವ ಇಂತಹ ಪ್ರಕರಣಗಳಲ್ಲಿ ಸರ್ಕಾರ ಯಾವ ಕಾನೂನು ಕ್ರಮ ಕೈಗೊಂಡಿದೆ , ಯಾರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು. ಭ್ರೂಣಹತ್ಯೆ ನಿಷೇಧ ಕಾನೂನಿನ ಪ್ರಕಾರ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಮಾಡುವವರಿಗೆ, ಮೂರರಿಂದ ಐದು ವರ್ಷಗಳ ಕಾಲ ಜೈಲು ಶಿಕ್ಷೆ, ೧೦ರಿಂದ ೫೦ ಸಾವಿರ ರೂ. ವರೆಗೆ ದಂಡ, ಮತ್ತು ಅವರ ವೈದ್ಯಕೀಯ ಪರವಾನಗಿಯನ್ನು ರದ್ದು ಪಡಿಸಿ, ಅವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.

ಆದರೆ ಈ ಕಾನೂನು ಜಾರಿಗೆ ಬಂದು ೩೦ ವರ್ಷಗಳಾದರೂ, ಇದುವರೆಗೂ ಒಬ್ಬರಿಗೂ, ಶಿಕ್ಷೆ ಯಾಗಿರುವ ಉದಾಹಣೆಗಳು ಇಲ್ಲ. ಕಠಿಣ ಕಾನೂನುಗಳನ್ನು ಜಾರಿ ಮಾಡುವುದಷ್ಟೇ ಅಲ್ಲ ಸಮರ್ಪಕವಾಗಿ ಅನುಷ್ಠಾನಗೊಳಿಸುವುದೂ ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕರೂ ಇದಕ್ಕೆ ಸಹಕರಿಸಿದರೆ ಭ್ರೂಣ ಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

5 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

6 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

6 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago