Andolana originals

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ ಮಾತನ್ನು ಅಷ್ಟೇ ಧೈರ್ಯವಾಗಿ ಈಗಿನ ಕಾಲಘಟ್ಟದಲ್ಲಿ ಹೇಳಲು ಸ್ವಲ್ಪ ಕಷ್ಟವೆನ್ನಬಹುದು. ಅದಕ್ಕೆ ಇತ್ತೀಚಿಗಿನ ಘಟನಾವಳಿಗಳನ್ನು ಮಾಧ್ಯಮಗಳಲ್ಲಿ ಗಮನಿಸುವವರಿಗೆ ಬೇಗ ಅರ್ಥವಾಗುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಅದರಲ್ಲೂ ಸರ್ಕಾರಿ ಸೇವೆಯಲ್ಲಿರುವ ಅನೇಕ ಮಹಿಳೆಯರಿಗೆ ಭ್ರಷ್ಟಾಚಾರದ ಮಸಿ ಅಂಟಿಕೊಳ್ಳುತ್ತಿರುವುದು ಆತಂಕ ಹುಟ್ಟಿಸುತ್ತಿದೆ. ತೀರಾ ಇತ್ತೀಚೆಗೆ, ಕರ್ನಾಟಕ ಆಡಳಿತ ಸೇವೆಯ ಮಹಿಳಾ ಅಧಿಕಾರಿಯೊಬ್ಬರು ಐದು ಲಕ್ಷ ರೂಪಾಯಿಗಳನ್ನು ಬೆಂಗಳೂರಿನ ಮತ್ತೊರ್ವ ಮಹಿಳಾ ವೈದ್ಯರಿಂದ ಲಂಚವಾಗಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ.

ಮಹಿಳೆಯರು, ಪುರುಷರಿಗಿಂತ ಸೂಕ್ಷ್ಮಮತಿಗಳಾಗಿರುತ್ತಾರೆ ಹಾಗೂ ಸಂವೇದನಾಶೀಲರಾಗಿರುತ್ತಾರೆ. ಲಂಚ, ಭ್ರಷ್ಟಾಚಾರ ಮುಂತಾದವುಗಳು ಅವರ ಹತ್ತಿರವೂ ಸುಳಿಯುವುದಿಲ್ಲ. ಎಂಬ ಸಾರ್ವತ್ರಿಕ ಭಾವನೆ ಸುಳ್ಳಾಗುತ್ತಿದೆ. ಇನ್ನು ಮುಂದಾದರೂ ಮಹಿಳಾ ನೌಕರರು ಅಥವಾ ಅಧಿಕಾರಿಗಳು ಲಂಚದಿಂದ ಅಂತರ ಕಾಪಾಡಿಕೊಳ್ಳುವುದು ಅವರವರ ವೈಯಕ್ತಿಕ ಹಿತದೃಷ್ಟಿಯಿಂದ ಹಾಗೂ ಆರೋಗ್ಯಕರ ಸಮಾಜದ ದೃಷ್ಟಿಯಿಂದ ಅಗತ್ಯವಾಗಿದೆ.

-ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago