ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ ಬೆಳೆಯಲು ಮತ್ತು ಜನ -ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಬೂಕನಕೆರೆ ಗ್ರಾಮದ ದೊಡ್ಡ ಕೆರೆಯೂ ಸೇರಿದಂತೆ ಈ ಗ್ರಾಮದ ಸುತ್ತಮುತ್ತಲಿನ ಕೆರೆಗಳಿಗೆ ಹೇಮಾವತಿ ಜಲಾಶಯ ದಿಂದ ನೀರು ತುಂಬಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





