ಮೈಸೂರಿನ ವಿ.ವಿ.ಮೊಹಲ್ಲಾದ ೨ನೇ ಮುಖ್ಯರಸ್ತೆ (ನಿರ್ಮಲಾ ಕಾನ್ವೆಂಟ್ ರಸ್ತೆ)ಯು ಹಳ್ಳ ಕೊಳ್ಳಗಳಿಂದ ಕೂಡಿದ್ದು, ದ್ವಿಚಕ್ರ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಇದರಿಂದ ತುಂಬಾ ತೊಂದರೆಯಾಗಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಓಡಿಸುವುದೇ ಹರ ಸಾಹಸವಾಗಿದೆ. ಎಲ್ಲೆಂದರಲ್ಲಿ ಉಬ್ಬು ತಗ್ಗುಗಳು ನಿರ್ಮಾಣವಾಗಿವೆ. ಇದೇ ರಸ್ತೆಯಲ್ಲಿ ನಿರ್ಮಲಾ ಕಾನ್ವೆಂಟ್ ಇರುವುದರಿಂದ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ನಡೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ವಾಯುವಿಹಾರಕ್ಕೆ ಚೆಲುವಾಂಬ ಉದ್ಯಾನವನಕ್ಕೆ ತೆರಳುವವರಿಗೂ ಇದರಿಂದ ಸಾಕಷ್ಟು ಕಿರಿಕಿರಿ ಉಂಟಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು





