Andolana originals

ಓದುಗರ ಪತ್ರ: ಸಿಗ್ನಲ್ ದೀಪಗಳನ್ನು ಸರಿಪಡಿಸಿ

ಮೈಸೂರಿನ ತಾತಯ್ಯ ಸರ್ಕಲ್, ರಾಮಸ್ವಾಮಿ ವೃತ್ತ, ಸಿದ್ದಪ್ಪ ವೃತ್ತ, ದಾಸಪ್ಪ ವೃತ್ತ, ಮೆಟ್ರೋಪೋಲ್ ವೃತ್ತ ಸೇರಿದಂತೆ ವಿವಿಧೆಡೆ ಇರುವ ಸಿಗ್ನಲ್ ದೀಪಗಳು ಸಂಚಾರ ನಿಯಮದ ಮಾನದಂಡ ದಂತೆ ಕಾರ್ಯನಿರ್ವಹಿಸುತ್ತಿಲ್ಲ.

ಕೆಂಪು ಬಣ್ಣ-ವಾಹನ ನಿಲ್ಲುವಂತೆ, ಹಳದಿ ಬಣ್ಣ-ವಾಹನಗಳು ಹೊರಡಲು ಸಿದ್ಧವಾಗಿರುವುದಕ್ಕೆ, ಹಸಿರು ಬಣ್ಣ- ವಾಹನಗಳು ಹೊರಡುವಂತೆ ಸಂಚಾರ ನಿಯಮ ಸೂಚಿಸುತ್ತದೆ. ಆರ್‌ಟಿಓ ಕಚೇರಿಗಳಲ್ಲಿ ವಾಹನ ಚಾಲನಾ ಪರವಾನಗಿ ಪಡೆಯುವ ಮುನ್ನ ನಡೆಸುವ ಪರೀಕ್ಷೆ ಸಮಯದಲ್ಲಿ ಈ ಬಗ್ಗೆ ತಿಳಿಸುತ್ತಾರೆ. ಆದರೆ ಮೈಸೂರು ನಗರದ ಅನೇಕ ವೃತ್ತದ ಸಿಗ್ನಲ್ ದೀಪಗಳಲ್ಲಿ ಕೆಂಪು ಮತ್ತು ಹಸಿರು ಬಣ್ಣದ ಸಿಗ್ನಲ್ ದೀಪಗಳು ಮಾತ್ರ ಬಳಕೆಯಾಗುತ್ತಿದ್ದು, ಹಳದಿ ಬಣ್ಣದ ದೀಪಗಳು ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮೈಸೂರು ನಗರದ ಸಂಚಾರ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಎಲ್ಲಾ ವೃತ್ತಗಳಲ್ಲಿರುವ ಸಿಗ್ನಲ್‌ಗಳಲ್ಲಿ ಹಾಳಾಗಿರುವ ಹಳದಿ ಬಣ್ಣದ ಸಿಗ್ನಲ್ ದೀಪಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯಾದ್ಯಂತ ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು: ಮಾರ್ಚ್.‌18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…

12 mins ago

ನಾನಿನ್ನೂ ಬದುಕಿದ್ದೇನೆ: ಕ್ಯಾಮರಾ ಮುಂದೆ ಪ್ರತ್ಯಕ್ಷರಾದ ಇಸ್ರೇಲ್‌ ಪ್ರಧಾನಿ

ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…

39 mins ago

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

4 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

4 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

4 hours ago