ಬಡ ವರ್ಗದ ಜನರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು.
ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚಾಗುತ್ತಿದ್ದು, ಈ ಯೋಜನೆಗಳಿಗಾಗಿ ಹಣ ಹೊಂದಿಸುವಲ್ಲಿಯೇ ಸರ್ಕಾರ ಮುಳುಗಿ ಹೋಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಕೇವಲ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಖರ್ಚು ಮಾಡುತ್ತಾ ಇತರೆ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸುತ್ತಿದೆ. ಸರ್ಕಾರದ ಈ ನಡೆ ಶಾಸಕರಿಗೂ ಬೇಸರ ತಂದಿದೆ. ಈ ಗ್ಯಾರಂಟಿ ಯೋಜನೆಗಳನ್ನು ಅವಶ್ಯಕತೆ ಇಲ್ಲದವರೂ ಪಡೆದುಕೊಳ್ಳುತ್ತಿರುವ ಪರಿಣಾಮ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗಿದೆ. ಉಳ್ಳವರೂ ಇದರ ಫಲಾನುಭವಿಗಳಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವೇ ಬದಲಾಗಿದೆ. ಆದ್ದರಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅಗತ್ಯವಿರುವವರಿಗೆ ಮಾತ್ರ ನೀಡಿ, ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಸ್ಥಗಿತಗೊಳಿಸಬೇಕು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಆ ಹಣವನ್ನು ರಾಜ್ಯದ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬಹುದಾಗಿದೆ.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…