Andolana originals

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ ವಿಷಯವಾಗಿದೆ.

ಇಷ್ಟು ದಿನ ಇದು ಅಧಿಕಾರಿಗಳ ಗಮನಕ್ಕೆ ಬಂದಿರಲಿಲ್ಲವೇ?, ಬೆಂಗಳೂರು ಒಂದೇ ಅಲ್ಲ ರಾಜ್ಯದ ದೊಡ್ಡ – ದೊಡ್ಡ ನಗರದ ಐಷಾರಾಮಿ ಹೋಟೆಲ್‌ಗಳಲ್ಲೂ ಇದೇ ಪರಿಸ್ಥಿತಿ ಇರುವುದಿಲ್ಲ ಎಂದು ನಂಬುವುದು ಹೇಗೆ? ಹಾಗಾಗಿ ರಾಜ್ಯದ ಎಲ್ಲ ಹೋಟೆಲ್‌ಗಳಲ್ಲೂ ಸಮಗ್ರ ತಪಾಸಣೆ ನಡೆಸಬೇಕು, ದುರಂತದ ಸಂಗತಿ ಎಂದರೆ, ಕೆಲವು ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಇದ್ದ ಆರೋಗ್ಯ ಇಲಾಖೆಯನ್ನು ರದ್ದು ಪಡಿಸಿ ಹೋಟೆಲ್‌ಗಳ ಆಹಾರ ಶುದ್ಧತೆ ಮತ್ತು ಸ್ವಚ್ಛತೆಯನ್ನು ಕಡೆಗಣಿಸಿದೆ. ಈಗ ಪರಿಸರ ಇಲಾಖೆ ಹೆಚ್ಚುವರಿಯಾಗಿ ಈ ಕೆಲಸ ನಿರ್ವಹಿಸುತ್ತಿದೆ.

ಅಮೆರಿಕದ ಖಾಸಗಿ ಸಂಸ್ಥೆಯೊಂದು ಹಳಸಿದ ಆಹಾರಗಳನ್ನು ತಿನ್ನುವುದರಿಂದ ಶೇ. ೨೦ ರಷ್ಟು ಜನರಿಗೆ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಆಹಾರ ತಿಂದರೆ ಕಾಯಿಲೆ ಬಾರದೇ ಇನ್ನೇನು ಬರಲು ಸಾಧ್ಯ ?ಇಂತಹ ಕಾರ್ಯಾಚರಣೆ ಅಪರೂಪಕ್ಕಾಗದೆ ನಿಯಮಿತವಾಗಿ ನಡೆಯಲಿ.

-ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago