ಮೈಸೂರು ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು, ರೌಡಿ ಪ್ರತಿಬಂಧಕ ದಳವನ್ನು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರಚಿಸಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ರೌಡಿಗಳ ಅಟ್ಟಹಾಸ ಮಿತಿಮೀರಿದೆ.
ಹಾಡಹಗಲೇ ಕೊಲೆ, ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಇಂತಹ ಪ್ರಕರಣಗಳಿಂದ ಸಾರ್ವಜನಿಕರು ಪೊಲೀಸ್ ವ್ಯವಸ್ಥೆಯ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪೊಲೀಸ್ ಆಯುಕ್ತರು ರೌಡಿ ಪ್ರತಿಬಂಧಕ ದಳ ರಚನೆ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಆದರೆ ಇದು ‘ಆರಂಭದ ಶೂರತ್ವ’ವಾಗ ಬಾರದು, ಇದು ಕಾರ್ಯರೂಪಕ್ಕೆ ಬಂದು ದುಷ್ಕರ್ಮಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳಬೇಕಿದೆ.
-ಬೂಕನಕೆರೆ ವಿಜೇಂದ್ರ,ಕುವೆಂಪು ನಗರ, ಮೈಸೂರು





