ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ ಆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪದವಿ ಶಿಕ್ಷಣದವರೆಗೆ ಉಚಿತ ಶಿಕ್ಷಣ, ೧ರಿಂದ ೧೨ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಪಘಾತ ವಿಮಾ ಸೌಲಭ್ಯ ಕಲ್ಪಿಸಿರುವುದು ಶ್ಲಾಘನೀಯ. ಎಲ್ಲ ರಾಜ್ಯಗಳಲ್ಲೂ ಇದೇ ಮಾದರಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸುವುದು ಅಗತ್ಯ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





