ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.
ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು ಹೋಗಿವೆ. ಇದರಿಂದಾಗಿ ಚರಂಡಿ ನೀರೆಲ್ಲ ರಸ್ತೆಗೆ ಹರಿಯುತ್ತಿದ್ದು, ಗ್ರಾಮದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಈ ಚರಂಡಿಗಳನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದಿವೆ. ಅವುಗಳನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಚರಂಡಿಗಳು ಕುಸಿದು ಬಿದ್ದಿದ್ದು, ಕೆಲ ಭಾಗಗಳಲ್ಲಂತೂ ಚರಂಡಿ ನೀರೆಲ್ಲ ಮನೆಯ ಬಾಗಿಲಿಗೆ ಹರಿಯುತ್ತಿದೆ. ಇನ್ನು ಗ್ರಾಮದ ರಸ್ತೆಗಳಲ್ಲಿಯೂ ಗುಂಡಿ
ಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇವುಗಳೊಂದಿಗೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಶೌಚಾಲಯದ ಕೊರತೆ ಹಾಗೂ ವಿದ್ಯುತ್ ಸಮಸ್ಯೆಯೂ ಕಾಡುತ್ತಿದ್ದು, ಮೂಲ ಸೌಕರ್ಯ ಗಳಿಂದ ವಂಚಿತರಾಗಿ ಜನರು ಸಂಕಷ್ಟದ ಜೀವನ ಸಾಗಿಸುವಂತಾಗಿದೆ. ಜತೆಗೆ ಗ್ರಾಮದಲ್ಲಿ ಅಶುಚಿತ್ವದಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಸಮಸ್ಯೆಗಳ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮೂಲಸೌರ್ಕಯಗಳನ್ನು ಕಲ್ಪಿಸಬೇಕಿದೆ.
-ಎಸ್. ಎಂ. ನವೀನ, ಸಿದ್ದಯ್ಯನಪುರ, ಚಾಮರಾಜನಗರ ತಾ.
ಮಾಗಿದ ಹಣ್ಣಲ್ಲ ಮಂತ್ರಕ್ಕೆ ಉದುರಿದ ಹಣ್ಣಲ್ಲ ಗುದ್ದಿ ಗುದ್ದಿ ಮಾಗಿಸಿದ ಹಣ್ಣು ಮತ್ತೆ ಮೈಮರೆತರೆ ಕೈಯಿಂದಲೇ ಮಾಯವಾಗುವ ಹಣ್ಣು ಕೈಗೆ…
ನಕಲಿ ನೋಟುಗಳು, ನಕಲಿ ಆಹಾರ ಪದಾರ್ಥಗಳು, ನಕಲಿ ದಾಖಲೆಗಳು, ನಕಲಿ ಅಧಿಕಾರಿಗಳು, ನಕಲಿ ಪೊಲೀಸರು, ನಕಲಿ ಸುದ್ದಿ ವಾಹಿನಿಗಳು ಅಷ್ಟೇ…
ಚನ್ನಪಟ್ಟಣದ ಕಲ್ಪಶ್ರೀ ಪ್ರದರ್ಶನ ಕಲೆಗಳು ಕೇಂದ್ರ ಟ್ರಸ್ಟ್ ವತಿಯಿಂದ ನವಂಬರ್ 5ರ ಸಂಜೆ 5.30ಕ್ಕೆ ಮಲೇಷಿಯಾದ ಕೌಲಾಲಂಪುರದ ಸುಭಾಷ್ ಚಂದ್ರ…
ಮಡಿಕೇರಿ: ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ನಡೆಯುವುದರಿಂದ ಮಧ್ಯಾಹ್ನ 2 ಗಂಟೆ ಬಳಿಕ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ…
ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಹುಲಿ ಸೆರೆಗೆ ದಸರಾ ಆನೆ ಮಹೇಂದ್ರನನ್ನು ಬಳಸಿಕೊಳ್ಳಲಾಗಿದೆ.…