ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ ಗೀಸರ್ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.
ಪುರುಷ ಸಂಶೋಧಕ ವಿದ್ಯಾರ್ಥಿ ನಿಲಯದ ಹಿಂಭಾಗದಲ್ಲಿ ಕಸ ಕಡ್ಡಿಗಳು ಸೇರಿದಂತೆ, ಪ್ಲಾಸ್ಟಿಕ್ ಕವರ್‌ಗಳು ಹರಡಿಕೊಂಡಿದ್ದು, ಕೆಟ್ಟ ವಾಸನೆ ಬರುತ್ತಿದ್ದು, ಸೊಳ್ಳೆಗಳ ಕಾಟದ ವಿಪರೀತವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ಸಂಬಂಧಪಟ್ಟವರು ಕೂಡಲೇ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಹಾಸ್ಟೆಲ್ ಸಮೀಪ ಬಿದ್ದಿರುವ ಕಸವನ್ನು ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





