ಓದುಗರ ಪತ್ರ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ನಂಜುಂಡೇಶ್ವರನ ಜಾತ್ರೆಗೆ ಮತ್ತಷ್ಟು ಮೆರಗನ್ನು ನೀಡಿದೆ. ಯೋಗ ಜಾಗೃತಿ, ವಚನ ಕಂಠಪಾಠ ಸ್ಪರ್ಧೆ,ಆರೋಗ್ಯಕರ ಜೀವನಕ್ಕೆ ಒಂದು ಹೆಜ್ಜೆ, ಚಿತ್ರಕಲಾ ಸ್ಪರ್ಧೆ, ಸಾಂಪ್ರದಾಯಿಕ ಸೀರೆ ಉಡುಗೆ ತೊಡುಗೆಗೆಗಳು, ಹೀಗೆ ನಾನಾ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ.
ಇದರಿಂದ ಕಲೆ, ಸಾಹಿತ್ಯ , ಸಂಸ್ಕೃತಿ ಎತ್ತಿ ಹಿಡಿದಂತಾಗುತ್ತದೆ, ಜೊತೆಗೆ ಪ್ರತಿಯೊಬ್ಬರಿಗೂ ಸಹ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಸದಾವಕಾಶಗಳನ್ನು ಕಲ್ಪಿಸುವುದಲ್ಲದೆ, ಜಾಗೃತ ಮನೋಭಾವನೆ ಮೂಡಿಸುವ ನಿಟ್ಟಿನಲ್ಲಿ ಇಂತಹ ವಿಭಿನ್ನ ಕಾರ್ಯಕ್ರಮಗಳು ಜರುಗುತ್ತಿರುವುದು ಸ್ವಾಗತಾರ್ಹ.
– ಬಿ.ಎಸ್. ಸಾಯಿ ಸಂದೇಶ್, ಮೈಸೂರು
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…