ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ಡಿ.೨೬ರಂದು ‘ಕಸದರಾಶಿ ತೆರವುಗೊಳಿಸಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಪತ್ರ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸಿದ್ದಾರೆ.
– ಬೂಕನಕೆರೆ ವಿಜಯೇಂದ್ರ, ಮೈಸೂರು



