Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.೧೧೫ ಏರಿಕೆಯಾಗಿದೆ. ಕಳೆದ ೧೧ ತಿಂಗಳಲ್ಲಿ ಇದು ಎರಡನೇ ಬಾರಿ ಏರಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಮಧ್ಯಮ ವರ್ಗದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯು ಹೋಟೆಲ್ ತಿಂಡಿಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ, ತೆರಿಗೆ ಕಡಿತ ಅಥವಾ ಸಬ್ಸಿಡಿ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!