ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. ಈ ಯೋಜನೆಯಡಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸಾರಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ೨೫೦ ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಡಬಂಡಿಕೆ ಮಾಡಿ ಕೊಂಡಿದೆ. ಈ ಸೌಲಭ್ಯವನ್ನು ಸರ್ಕಾರ ಎಲ್ಲ ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಆದ್ದರಿಂದ ಈ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ರಾಜ್ಯ ಸರ್ಕಾರ ಎಲ್ಲ ನೌಕರರಿಗೂ ವಿಸ್ತರಿಸಿದರೆ ಅನುಕೂಲವಾಗಲಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಪೊಲೀಸರ ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು ಮೈಸೂರು: ಗಾಂಜಾ, ಎಂಡಿಎನ್ ಇತರೆ ಮಾದಕ ವಸ್ತುಗಳ ಸೇವನೆಗೆ ಬ್ರೇಕ್ ಹಾಕಿ..,…
ಎಂದೂ ಮುಕ್ಕಾಗದ ಸಿದ್ದರಾಮಯ್ಯ- ಎಚ್.ಸಿ.ಮಹದೇವಪ್ಪ ಅವರ 40 ವರ್ಷಗಳ ಸ್ನೇಹ ಸಮಾಜವಾದಿ ಸಿದ್ಧಾಂತದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಂಬೇಡ್ಕರ್ ವಾದಿ,…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ರಾಜ್ಯ ಸರ್ಕಾಗಳು ತನ್ನ ತಾಳಕ್ಕೆ ತಕ್ಕಂತೆ ಕುಣಿಯಬೇಕು ಎನ್ನುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ…
ಗ್ರಾಮಗಳ ಕಲ್ಯಾಣಕ್ಕಾಗಿ ಗ್ರಾಮದೇವರಿಗೆ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ ಲಕ್ಷ್ಮೀ ಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಭಾಗಗಳಲ್ಲಿ…
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ಮಂಡನೆ ಆಗಿರುವ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಸಾಮಾಜಿಕ, ಆರ್ಥಿಕ…
ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ಕ್ಕೂ ಹೆಚ್ಚು ಮರಗಳನ್ನು ರಸ್ತೆ ಅಗಲೀಕರಣದ ನೆಪದಲ್ಲಿ ಕಡಿದುರುಳಿಸಿರುವುದು ಬೇಸರದ ಸಂಗತಿ. ವಾತಾವರಣವನ್ನು ತಂಪಾಗಿಡಲು ನಗರ…