Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಓದುಗರ ಪತ್ರ: ಆಂಬ್ಯುಲೆನ್ಸ್ ಸಿಬ್ಬಂದಿಗೆ ವೇತನ ನೀಡಿ

108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಕಳೆದ 3-4 ತಿಂಗಳುಗಳಿಂದ ವೇತನವಿಲ್ಲದೇ ಕುಟುಂಬ ನಿರ್ವಹಣೆ ಮಾಡಲಾಗದೇ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ.

ನ.15ರ ರಾತ್ರಿ 8.00 ಗಂಟೆಯ ಒಳಗೆ ವೇತನ ನೀಡದೇ ಹೋದಲ್ಲಿ ಕೆಲಸಕ್ಕೆ ಗೈರಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಕವಚ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಮಯಕ್ಕೆ ತಕ್ಕಂತೆ ವೇತನ ನೀಡಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರ ಪ್ರತಿ ಬಾರಿಯೂ ತಡವಾಗಿಯೇ ವೇತನ ನೀಡುತ್ತಿದ್ದು, 108 ಆಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ತಮ್ಮ ಕುಟುಂಬಗಳನ್ನೂ ಬಿಟ್ಟು ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸಿಬ್ಬಂದಿಗಳ ವೇತನವನ್ನು ತಿಂಗಳುಗಟ್ಟಲೆ ತಡೆಹಿಡಿದರೆ ಅವರು ಕುಟುಂಬ ನಿರ್ವಹಣೆ ಮಾಡುವುದಾದರೂ ಹೇಗೆ? ಇದಿಷ್ಟೇ ಅಲ್ಲದೆ ಇವರಿಗೆ ಹತ್ತಾರು ಸಮಸ್ಯೆಗಳಿದ್ದು, ಅವುಗಳನ್ನೂ ನಿವಾರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟವರಿಗೆ ಸರಿಯಾದ ಸಮಯಕ್ಕೆ ವೇತನ ನೀಡುವಂತೆ ಸೂಚನೆ ನೀಡಬೇಕಿದೆ.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾಲ್ಲೂಕು.

Tags:
error: Content is protected !!