2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು.
ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿಯೂ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ. ಇನ್ನು ತಾಲ್ಲೂಕಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳೂ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ.
ಸರಗೂರು ತಾಲ್ಲೂಕು ಆಗಿದ್ದರೂ ಇಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ಅನೇಕ ಇಲಾಖೆಗಳೇ ಇಲ್ಲದೆ ಜನರು ಎಲ್ಲ ಕೆಲಸ ಕಾರ್ಯಗಳಿಗೂ ಎಚ್.ಡಿ. ಕೋಟೆಗೆ ಅಲೆಯಬೇಕಾಗಿದೆ. ಹೀಗಾದರೆ ತಾಲ್ಲೂಕು ಅಭಿವೃದ್ದಿ ಯಾಗುವುದಾದರೂ ಹೇಗೆ? ಪ್ರಸ್ತುತ ಸಿದ್ದರಾಮಯ್ಯನವರೇ ಮುಖ್ಯ ಮಂತ್ರಿಯಾಗಿದ್ದು, ತಾವೇ ಘೋಷಿಸಿದ ಸರಗೂರು ತಾಲ್ಲೂಕಿಗೆ ವಿಶೇಷ ಪ್ಯಾಕೇಜ್ ನೀಡಿ ಅಭಿವೃದ್ಧಿ ಮಾಡಬೇಕಿದೆ.
-ಸಿ.ನಿಂಗರಾಜು, ಹಳೇಹೆಗ್ಗುಡಿಲು, ಸರಗೂರು ತಾ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್ ಕೊಡಲು…