Andolana originals

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ಓದುತ್ತಿರುವ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುವಂತಾದರೆ ಮಕ್ಕಳ ಸಂಖ್ಯೆ ಹೆಚ್ಚುವುದರಿಂದ ಸರ್ಕಾರಿ ಶಾಲೆಗಳು ಉನ್ನತೀಕರಣ ಆಗಬಹುದು.

ಸರ್ಕಾರಿ ನೌಕರರು ಸರ್ಕಾರದಿಂದ ಪ್ರತಿಯೊಂದು ಸೌಲಭ್ಯವನ್ನು ಪಡೆಯುತ್ತಾರೆ.ಜೀವನ ಸುರಕ್ಷಿತವಾಗಿ ನಡೆಯಲು ಸರ್ಕಾರಿ ನೌಕರಿಯೇ ಕಾರಣ ಎಂಬ ಭಾವನೆಯನ್ನು ಹೊಂದಿರುತ್ತಾರೆ. ಆದರೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಹಿಂಜರಿಯುತ್ತಾರೆ.

ತಮ್ಮ ಸುರಕ್ಷಿತ ಬದುಕು ನಡೆಸಲು ಸರ್ಕಾರಿ ನೌಕರಿ ಬೇಕು. ಆದರೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದಿಲ್ಲ ಎಂದರೆ  ಹೇಗೆ? ಆದ್ದರಿಂದ ಸರ್ಕಾರ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಸಂಬಂಧ ಕಾಯ್ದೆಯನ್ನು ರೂಪಿಸುವಂತಾದರೆ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಹಕಾರಿಯಾಗುತ್ತದೆ.

-ಪಿ ಸಿ ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ ಮೈಸೂರು

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago