ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯ. ಇದನ್ನು ಖಂಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು , ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಹಂಪಾಪುರ ಹಾಗೂ ಜಿನ್ನಹಳ್ಳಿಯ ಸರ್ಕಾರಿ ಶಾಲೆಗಳನ್ನು ಹೊಮ್ಮರಗಳ್ಳಿಯ ಶಾಲೆಯೊಂದಿಗೆ ವಿಲೀನಗೊಳಿಸಲಾಗುತ್ತಿದೆ. ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಪ್ರಾಥಮಿಕ ಶಿಕ್ಷಣವು ಒಂದು ಕಿ.ಮೀ. ವ್ಯಾಪ್ತಿಯ ಒಳಗಡೆ ಇರಬೇಕು ಎಂಬ ನಿಯಮಗಳು ಇವೆ.ಇದಕ್ಕೆ ವಿರುದ್ಧವಾಗಿ ಸರ್ಕಾರವು ಈ ಶಾಲೆಯನ್ನು ವಿಲೀನ ಮಾಡುತಿರುವುದು ಖಂಡನೀಯ. ಇತ್ತೀಚೆಗೆ ಹೊರಡಿಸಲಾದ ಸರ್ಕಾರದ ಹೊಸ ಆದೇಶವು ಕೌಶಲಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಹಣತೆ ಮಾಡಲು,ಅಡಕೆ ಕಾಯಿ ಬಿಡಿಸಲು, ತರಬೇತಿ ನೀಡುತ್ತಾ ಸರ್ಕಾರಿ ಶಾಲೆ ಮಕ್ಕಳನ್ನು ಉನ್ನತ ಶಿಕ್ಷಣದಿಂದ ದೂರ ಉಳಿಯುವಂತೆ ಹಾಗೂ ಬಡ ಕುಟುಂಬದ ಮಕ್ಕಳನ್ನು ಬಾಲ ಕಾರ್ಮಿಕ ರಾಗಿಸುವ ಸಂಚನ್ನು ಕಾನೂನಾತ್ಮಕವಾಗಿಯೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಅನುಷ್ಠಾನಕ್ಕೆ ತರುವುದು ವಿಷಾದನೀಯ.
– ಸಿದ್ದಲಿಂಗೇಗೌಡ. ಹೈರಿಗೆ, ಹೆಚ್.ಡಿ. ಕೋಟೆ ತಾಲ್ಲೂಕು





