Mysore
24
overcast clouds

Social Media

ಮಂಗಳವಾರ, 20 ಅಕ್ಟೋಬರ್ 2026
Light
Dark

ಓದುಗರ ಪತ್ರ: ಎಸ್‌ಸಿ, ಎಸ್‌ಟಿ ಮೀಸಲು ಉಳಿಸಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಲಿ

ಇತ್ತೀಚೆಗೆ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಕ್ಷೇತ್ರದಲ್ಲಿ ಕ್ರಮವಾಗಿ ಎಸ್‌ಸಿಗೆ ಶೇಕಡಾ ೧೭ ಮತ್ತು ಎಸ್‌ಟಿಗೆ ಶೇಕಡಾ ೭ ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದನ್ನು ರದ್ದುಗೊಳಿಸಿದ್ದು, ಈ ತೀರ್ಪು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಏಕೆಂದರೆ ವರದಿಗಳ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಸಮುದಾಯಗಳು ಶಿಕ್ಷಣ, ಉದ್ಯೋಗ, ಭೂಮಿ, ಕೈಗಾರಿಕಾ ಇನ್ನಿತರ ಕ್ಷೇತ್ರಗಳಲ್ಲಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ತೀರಾ ಹಿಂದುಳಿದ ಸಮುದಾಯಗಳಾಗಿವೆ. ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಇನ್ನೂ ಚೇತರಿಕೆ ಕಂಡಿಲ್ಲ. ಈ ಮುಖ್ಯ ಸಂಗತಿಯನ್ನು ಘನ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಈ ತೀರ್ಪನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಿದೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ಶೇ. ೬೯ ರಷ್ಟು ಮೀಸಲಾತಿ ಇದೆ ಎಂಬುದನ್ನು ಸರ್ಕಾರವು ಸಮರ್ಥವಾಗಿ ಸಾಬೀತುಪಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಮೂಲಕ ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಸದರಿ ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಬೇಕಿದೆ. ಜೊತೆಗೆ ರಾಜ್ಯದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಸಂವಿಧಾನದ ೯ನೆಯ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕಿದೆ.

 – ಎಂ. ಪಿ. ದರ್ಶನ್ ಚಂದ್ರ ಮುಕ್ಕಡಹಳ್ಳಿ, ಚಾಮರಾಜನಗರ ತಾ.

Tags:
error: Content is protected !!