ಇತ್ತೀಚೆಗೆ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಕ್ಷೇತ್ರದಲ್ಲಿ ಕ್ರಮವಾಗಿ ಎಸ್‌ಸಿಗೆ ಶೇಕಡಾ ೧೭ ಮತ್ತು ಎಸ್‌ಟಿಗೆ ಶೇಕಡಾ ೭ ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದನ್ನು ರದ್ದುಗೊಳಿಸಿದ್ದು, ಈ ತೀರ್ಪು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಏಕೆಂದರೆ ವರದಿಗಳ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಸಮುದಾಯಗಳು ಶಿಕ್ಷಣ, ಉದ್ಯೋಗ, ಭೂಮಿ, ಕೈಗಾರಿಕಾ ಇನ್ನಿತರ ಕ್ಷೇತ್ರಗಳಲ್ಲಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ತೀರಾ ಹಿಂದುಳಿದ ಸಮುದಾಯಗಳಾಗಿವೆ. ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಇನ್ನೂ ಚೇತರಿಕೆ ಕಂಡಿಲ್ಲ. ಈ ಮುಖ್ಯ ಸಂಗತಿಯನ್ನು ಘನ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಈ ತೀರ್ಪನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಿದೆ. ನೆರೆಯ ತಮಿಳುನಾಡು ರಾಜ್ಯದಲ್ಲಿ ಶೇ. ೬೯ ರಷ್ಟು ಮೀಸಲಾತಿ ಇದೆ ಎಂಬುದನ್ನು ಸರ್ಕಾರವು ಸಮರ್ಥವಾಗಿ ಸಾಬೀತುಪಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಮೂಲಕ ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಸದರಿ ಮೀಸಲಾತಿ ಪ್ರಮಾಣವನ್ನು ಉಳಿಸಿಕೊಳ್ಳಬೇಕಿದೆ. ಜೊತೆಗೆ ರಾಜ್ಯದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಸಂವಿಧಾನದ ೯ನೆಯ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಬೇಕಿದೆ.
– ಎಂ. ಪಿ. ದರ್ಶನ್ ಚಂದ್ರ ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ನಡೆಯಲಿರುವ…
ಮೈಸೂರು ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೇರೆ ಊರುಗಳಿಂದ ಪ್ರತಿನಿತ್ಯ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಆದರೆ ಆಟೋ ಚಾಲಕರು ಪ್ರಯಾಣಿಕರಿಂದ ಮನಸೋ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆ ಅನ್ನದಾತರಲ್ಲಿ ಹೊಸ ಆಶಾಭಾವ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ…
ಮೈಸೂರು: ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ. ನವರಾತ್ರಿ ಉತ್ಸವದ ಅಂಗವಾಗಿ ಜನರು ತಮ್ಮ ಬದುಕಿಗೆ ಆಧಾರವಾಗಿರುವ ಉಪಕರಣಗಳು, ಯಂತ್ರಗಳು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅರಮನೆಯ ಆಯುಧ ಪೂಜೆಗೆ ವಿಶೇಷ ಸ್ಥಾನವಿದೆ. ರಾಜವಂಶದ ಪರಂಪರೆ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ…
ರಾಯಚೂರು ಜಿಯ ಐತಿಹಾಸಿಕ ಪಟ್ಟಣ ಎಂದೇ ಗುರುತಿಸಿಕೊಂಡಿರುವ ಮಸ್ಕಿಯ ಶಿಲಾಶಾಸನ ಸ್ಥಳಕ್ಕೆ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಅಶೋಕನ ಹಿಂದಿನ…