ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ೧೬ನೇ ಬಜೆಟ್‌ನಲ್ಲಿ ಚಾಮರಾಜನಗರಕ್ಕೆ ನೀಡಿದ ಒಂದಿಷ್ಟು ಯೋಜನೆಗಳನ್ನು ಹೊರತುಪಡಿಸಿದರೆ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಕೊಡುಗೆಗಳನ್ನು ನೀಡಿಲ್ಲ ಅನಿಸುತ್ತದೆ.
ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿರುವ ಚಾಮರಾಜನಗರ ಜಿಲ್ಲೆಯ ಮೇಲೆ ಸಿದ್ದರಾಮಯ್ಯನವರಿಗೆ ಅಪಾರ ಕಾಳಜಿ ಇದೆ. ಹೀಗಾಗಿ ಅವರು ಈ ಬಾರಿಯಾದರೂ ವಿಶೇಷಯೋಜನೆಗಳನ್ನು ಘೋಷಿಸಿ, ಹೆಚ್ಚಿನ ಅನುದಾನವನ್ನು ನೀಡಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾರೆ ಎಂಬ ನಂಬಿಕೆ ಈ ಭಾಗದ ಜನರಲ್ಲಿತ್ತು. ಆದರೆ ಬಜೆಟ್‌ನಲ್ಲಿ ಹೇಳಿಕೊಳ್ಳುವಷ್ಟು ಅನುದಾನ ಸಿಗದಿರುವುದು ಜನರಲ್ಲಿ ಬೇಸರ ಮೂಡಿಸಿದೆ.
ಈ ಬಾರಿಯಾದರೂ ಬಜೆಟ್‌ನಲ್ಲಿ ಉನ್ನತ ಶಿಕ್ಷಣ, ಕೃಷಿ, ಕೈಗಾರಿಕಾ ರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಿ, ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಮೂಲಸೌಕರ್ಯಗಳನ್ನು ಒದಗಿಸಿದ್ದರೆ ಅನುಕೂಲವಾಗುತ್ತಿತ್ತು. ಮುಂದಿನ ದಿನಗಳಲ್ಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತಾಗಲಿ.
-ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.





