Andolana originals

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.

ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!

 –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

54 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

55 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

58 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago