ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ ಮೊದಲನೇ ದಿನ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಗಣ್ಯ ವ್ಯಕ್ತಿಗಳು ತಾಯಿ ಚಾಮುಂಡೇಶ್ವರಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿಸುವ ಸಂಪ್ರದಾಯ ರೂಢಿಗೆ ಬಂದಿದೆ.
ಈ ಬಾರಿಯ ದಸರಾ ಉದ್ಘಾಟನೆಯನ್ನು ಹಿರಿಯ ರಾಜಕೀಯ ಧುರೀಣರೂ, ಮಾಜಿ ಪ್ರಧಾನಿಯೂ ಆದ ಹೆಚ್.ಡಿ. ದೇವೇಗೌಡ ಅವರಿಂದ ಮಾಡಿಸಿದರೆ ಸೂಕ್ತವಾಗಿರುತ್ತದೆ. ಹೇಮಾವತಿ ಅಣೆಕಟ್ಟೆಯನ್ನು ನಿರ್ಮಿಸುವಲ್ಲಿ ಗೌಡರು ಪ್ರಮುಖ ಪಾತ್ರ ವಹಿಸಿ ಬರಡು ಭೂಮಿಗೆ ನೀರು ಹರಿಸಿದರು ಹಾಗೆಯೇ ಆಲಮಟ್ಟ ಅಣೆಕಟ್ಟೆ ಎತ್ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದವರು. ನೀರಾವರಿ ಬಗ್ಗೆ ,ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅಭಿಮಾನಿಗಳಲ್ಲಿ ‘ಮಣ್ಣಿನ ಮಗ’ ಎಂದೂ ಕರೆಸಿಕೊಂಡಿದ್ದಾರೆ.
೧೯೮೩ರಲ್ಲಿ ಕಾಂಗ್ರೆಸ್ಸೇತರ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದವರು. ಹಾಗೆಯೇ ೧೯೯೪ ರಲ್ಲಿ ಮುಖ್ಯಮಂತ್ರಿ ಆಗಿ ನಂತರ ೧೯೯೬ರಲ್ಲಿ ಕೇಂದ್ರದಲ್ಲಿ ಅತಂತ್ರ ಲೋಕಸಭೆ ರಚನೆಯಾದಾಗ ಪ್ರಧಾನಿ ಹುದ್ದೆ ಅಲಂಕರಿಸಿ, ಕರ್ನಾಟಕದ ಮೂದಲ ಪ್ರದಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಾರ್ವಜನಿಕ ಕ್ಷೇತ್ರದಲ್ಲಿ ಈಗಲೂ ಸಕ್ರಿಯರಾಗಿರುವ ಈ ಹಿರಿಯ ರಾಜಕೀಯ ಮುತ್ಸದ್ದಿಯನ್ನು ರಾಜ್ಯ ಸರ್ಕಾರ ೨೦೨೬ ನೇ ಸಾಲಿನ ದಸರಾ ಉದ್ಘಾಟರಾಗಿ ಆಯ್ಕೆ ಮಾಡಿದರೆ ಒಳ್ಳೆಯದು. ಚಾಣಾಕ್ಷ ರಾಜಕಾರಣಿ, ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವೇಗೌಡರ ಆಯ್ಕೆಯನ್ನು ಘೋಷಿಸಲಿ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…