ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಹೇರ್‌ಡೈ (ಕೂದಲಿಗೆ ಹಚ್ಚುವ ಕೃತಕ ಬಣ್ಣ) ಉಪಯೋಗ ಸರ್ವೇ ಸಾಮಾನ್ಯವಾಗಿದೆ. ಹೇರ್ ಡೈಗಳಲ್ಲಿ ಇರುವ ಹಲವಾರು ರಾಸಾಯನಿಕಗಳು ನಮ್ಮ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.
ಹೇರ್ ಡೈಯಲ್ಲಿರುವ ಪ್ಯಾರಾಫೆನಿಲೆಂಡಿಯಾಮಿನ್, ಟೋಲುಯೆನ್-೨. ೫-ಡಯಾಮಿನ್ ಮುಂತಾದ ರಾಸಾಯನಿಕಗಳು ತ್ವಚೆಗೆ ಹಾನಿ ಮಾಡಬಹುದು, ಅಲರ್ಜಿಗಳನ್ನು ಉಂಟುಮಾಡಬಹುದು ಮತ್ತು ಕೆಲವೊಮ್ಮೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು. ಇತ್ತೀಚೆಗೆ, ಇತರ ದೇಶಗಳು ಈ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಯುರೋಪಿಯನ್ ಯೂನಿಯನ್ ಹೇರ್ ಡೈಗಳಲ್ಲಿ ಕೆಲವು ಹಾನಿಕರ ರಾಸಾಯನಿಕಗಳನ್ನು ನಿಷೇಧಿಸಿತು. ಅಮೆರಿಕದ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಕೂಡ, ಈ ರಾಸಾಯನಿಕಗಳನ್ನು ಹೆಚ್ಚಾಗಿ ಪರಿಶೀಲಿಸುಮಾಡಿ, ಸುರಕ್ಷತೆ ಹೆಚ್ಚಿಸಲು ಕ್ರಮಗಳನ್ನು ಜಾರಿಗೆ ತಂದಿದೆ.
ಭಾರತದಲ್ಲಿಯೂ, ಹೇರ್ ಡೈಗಳಲ್ಲಿ ಹಾನಿಕರ ರಾಸಾಯನಿಕಗಳ ಬಳಕೆಯನ್ನು ನಿಯಂತ್ರಿಸಲು ಸರಕಾರವು ಕ್ರಮಗಳನ್ನು ಕೈಗೊಳ್ಳಬೇಕು. ಸರಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಸಾಮಾಜಿಕ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಿ ಸುರಕ್ಷಿತ ಆಯ್ಕೆಗಳನ್ನು ಮಾಡಲು ಪ್ರೋತ್ಸಾಹಿಸಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…