ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿರುವುದು ನಿಜಕ್ಕೂ ಖಂಡನೀಯ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಲಾಪದ ವೇಳೆ ಶಾಸಕ ಹರೀಶ್ ಪೂಂಜಾ ಈ ರೀತಿ ಹೇಳಿದ್ದು, ರೈತರಿಗೆ ಕೋವಿ ಪಡೆಯಲು ಪರವಾನಗಿ ನೀಡಿ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದಿದ್ದಾರೆ.
ಇದಕ್ಕೆ ಪ್ರತಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಅನುಮತಿ ಕೇಳಿದ್ದು, ದುರದೃಷ್ಟಕರ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಅಷ್ಟಕ್ಕೂ ಕಾಡಿದ್ದರೇ ನಾಡು ಎಂಬ ಕನಿಷ್ಠ ಜ್ಞಾನವೂ ಹರೀಶ್ ಪೂಂಜಾರವರಿಗೆ ಇಲ್ಲದೆ ಹೋದದ್ದೇ ಬೇಸರದ ಸಂಗತಿ. ೧೯೭೪ರ ವನ್ಯಜೀವಿ ಕಾಯ್ದೆಯ ಪ್ರಕಾರ ವನ್ಯಜೀವಿಗಳನ್ನು ಕೊಲ್ಲುವುದು, ಅವುಗಳನ್ನು ಕೊಲ್ಲುವಂತೆ ಪ್ರಚೋದಿಸುವುದು ಎರಡೂ ಅಪರಾಧ. ಆನೆಗಳು ಎಂದರೆ ನಮಗೆ ವಿಶೇಷವಾದ ಪ್ರೀತಿ ಇದೆ.
ದೈವತ್ವದ ಭಾವನೆಯೂ ಇದೆ. ಇಂತಹ ಆನೆಗಳು ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಕಂಬಿ ಬ್ಯಾರಿಕೇಡ್ ಅಳವಡಿಸುವುದು ಅಥವಾ ಟ್ರಂಚ್‌ಗಳ ನಿರ್ಮಾಣ ಮಾಡವ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕೇ ವಿನಾ ಅವುಗಳನ್ನು ಕೊಲ್ಲುತ್ತೇವೆ ಎನ್ನುವುದು ಅಮಾನವೀಯ ವರ್ತನೆ. ಸರ್ಕಾರ ಶಾಸಕ ಹರೀಶ್ ಪೂಂಜಾರವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್. ಡಿ. ಕೋಟೆ ತಾ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…