ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ ಮಾಡಿದ್ದಾರೆ.
ಈ ಕಟ್ಟಡದ ಕೆಲಸ ಪೂರ್ಣಗೊಂಡು ಸುಮಾರು ತಿಂಗಳು ಕಳೆದರೂ ಇನ್ನೂ ಶೌಚಾಲಯ ಸಾರ್ವಜನಿಕರಿಗೆ ಲಭ್ಯವಾಗಿಲ್ಲ. ಸಾರ್ವಜನಿಕರು, ಶಾಲೆ- ಕಾಲೇಜು ವಿದ್ಯಾರ್ಥಿಗಳು, ದಿನನಿತ್ಯ ಆಡಳಿತ ಕಚೇರಿ ಕೆಲಸಕ್ಕೆ ಬರುತ್ತಾರೆ. ಆದರೆ ಶೌಚಾಲಯದ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೆ ಶೌಚಾಲಯ ಕಟ್ಟಿರುವ ಉದ್ದೇಶವನ್ನು ಈಡೇರಿಸುವತ್ತ ಗಮನ ಹರಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು



