ಓದುಗರ ಪತ್ರ
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ.
ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು ಕನ್ನಡಿಗರು ವ್ಯಕ್ತ ಮಾಡುತ್ತಿದ್ದಾರೆ. ವಿಳಂಬವಾದರೂ, ಕನ್ನಡಿಗರ ಹೋರಾಟ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ಈ ಸಿಬ್ಬಂದಿ ಸ್ಥಳೀಯ ಭಾಷೆಯನ್ನು ಕಲಿತು ಅದರಲ್ಲಿ ವ್ಯವಹರಿಸಲು ಶುರು ಮಾಡುವ ಹೊತ್ತಿಗೆ ಅವರಿಗೆ ವರ್ಗಾವಣೆ ಆದರೆ, ಇದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪ್ರಯತ್ನ ಯಶಸ್ವಿ ಆಗಬಹುದೇ ಎನ್ನುವ ಜಿಜ್ಞಾಸೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಇದರ ಬದಲಾಗಿ ಸಿಬ್ಬಂದಿಗಳನ್ನು ಸ್ಥಳೀಯವಾಗಿ ಆಯ್ಕೆ ಮಾಡಿ, ಅವರನ್ನು ಅವರವರ ಭಾಷಾ ಪ್ರದೇಶಗಳಲ್ಲಿಯೇ ವರ್ಗಾವಣೆ ಮಾಡಬಹುದಲ್ಲವೇ?
– ರಮಾನಂದ ಶರ್ಮಾ, ಬೆಂಗಳೂರು
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…