Andolana originals

ಓದುಗರ ಪತ್ರ:  ಆಸ್ಪತ್ರೆ: ಭರವಸೆಗಿಂತಲೂ ಭಯವೇ ಜಾಸ್ತಿ

ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ.

ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ ಕುಸಿಯುತ್ತಿದೆ.

ಸತ್ತ ರೋಗಿಯನ್ನು ಬದುಕಿದ್ದಾರೆಂದು ಸುಳ್ಳುಹೇಳಿ ವೆಂಟಿಲೇಟರ್ ಬಿಲ್ ಮಾಡುವುದು ಹಾಗೂ ಕಮಿಷನ್ ಆಸೆಗಾಗಿ ಅನಗತ್ಯ ಪರೀಕ್ಷೆಗಳಿಗೆ ಶಿಫಾರಸು ಮಾಡುವುದು ಅಕ್ಷಮ್ಯ ಅಪರಾಧ. ‘ವೈದ್ಯೋ ನಾರಾಯಣೋಹರಿಃ’ ಎಂಬ ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಬಡವರ ರಕ್ತಹೀರುವ ಈ ಮಾಫಿಯಾ ನಿಲ್ಲಬೇಕಿದೆ. ಔಷಧ ಕಂಪೆನಿಗಳ ಆಮಿಷಕ್ಕೆ ಒಳಗಾಗಿ ಜನರಿಕ್ ಮದ್ದುಗಳನ್ನು ನೀಡುವ ಬದಲು, ದುಬಾರಿ ಬ್ರ್ಯಾಂಡ್‌ಗಳನ್ನು ರೋಗಿಗಳ ಮೇಲೆ ಹೇರುವುದು ಎಷ್ಟುಸರಿ? ಸರ್ಕಾರವು ತಕ್ಷಣವೇ ಇಂತಹ ದಂಧೆ ನಡೆಸುವ ಆಸ್ಪತ್ರೆಗಳ ಮೇಲೆ ಕಠಿಣ ನಿಗಾ ಇಡಬೇಕು ಮತ್ತು ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಜನ ಸಾಮಾನ್ಯರು ಆಸ್ಪತ್ರೆಗೆ ಹೋದಾಗ ಪರೀಕ್ಷೆ ಅಥವಾ ಶಸ್ತ್ರ ಚಿಕಿತ್ಸೆಯ ಅಗತ್ಯದ ಬಗ್ಗೆ ಸಂಶಯವಿದ್ದರೆ, ಮತ್ತೊಬ್ಬ ವೈದ್ಯರ ಅಭಿಪ್ರಾಯ (ಸಕೆಂಡ್ ಒಪೀನಿಯನ್) ಪಡೆಯಲು ಹಿಂಜರಿಯಬಾರದು. ನಾವು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆ ಎನ್ನುವುದು ಸಾಮಾನ್ಯ ಜನರಿಗೆ ಲಭ್ಯವಾಗುವ ಗ್ಯಾರಂಟಿಯೇ ಇರುವುದಿಲ್ಲ.

– ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

3 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

3 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

3 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

3 hours ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

3 hours ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

3 hours ago