ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯ.
ವಿಜಯನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ೬೪೦ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೇರಿದ ಗ್ರಾಮಗಳಾದ ಇಲವಾಲ, ಬೋಗಾದಿ, ಹಿನಕಲ್, ಹೂಟಗಳ್ಳಿ, ಕೂರ್ಗಳ್ಳಿ, ಬೆಳವಾಡಿ, ಸಿದ್ದಲಿಂಗಪುರ ಗ್ರಾಮಗಳಿಂದ ಬರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿನಿಯರೇ ಹೆಚ್ಚಾಗಿದ್ದು, ಇವರುಗಳಿಗೆ ಬಿಸಿಯೂಟ ಯೋಜನೆಯಿಂದ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೂ ರಾಜ್ಯಾದ್ಯಂತ ಬಿಸಿಯೂಟ ಯೋಜನೆ ವಿಸ್ತರಣೆ ಮಾಡಲು ಸರ್ಕಾರ ಕ್ರಮ ಕೈಗೊಂಡರೆ ಅನುಕೂಲವಾಗುತ್ತದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು



