ಓದುಗರ ಪತ್ರ
ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು ಸಣ್ಣ ಅಕ್ಷರಗಳಲ್ಲಿ ಬರೆದು ಜನರನ್ನು ವಂಚಿಸುತ್ತಿವೆ. ಫ್ರಾನ್ಸ್‌ನ ನ್ಯೂಟ್ರಿ ಸ್ಕೋರ್ (ಎ ಇಂದ ಈ) ಮಾದರಿಯನ್ನು ಭಾರತದಲ್ಲೂ ತಕ್ಷಣವೇ ಕಡ್ಡಾಯಗೊಳಿಸಬೇಕು.
ಪ್ರಸ್ತುತ ಎಫ್.ಎಸ್.ಎಸ್. ಎ.ಐ. ತರಲು ಹೊರಟಿರುವ ಸ್ಟಾರ್ ರೇಟಿಂಗ್ ವ್ಯವಸ್ಥೆಯು ಕಾರ್ಪೊರೇಟ್ ಕಂಪೆನಿಗಳ ಲಾಭಕ್ಕಾಗಿ ಹೆಣೆದಿರುವ ಕಣ್ಣೊರೆಸುವ ತಂತ್ರವಾಗಿದೆ. ಪ್ಯಾಕೆಟ್‌ಗಳ ಮೇಲೆ ನೂತನ ತಂತ್ರeನ ಆಧಾರಿತ ಬಾರ್‌ಕೋಡ್ ಮತ್ತು ಸ್ಮಾರ್ಟ್ ಕ್ಯೂಆರ್ ತಂತ್ರeನವನ್ನು ಅಳವಡಿಸಬೇಕು. ಗ್ರಾಹಕರು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದ ತಕ್ಷಣ ಆಹಾರದಲ್ಲಿರುವ ಅಪಾಯಕಾರಿ ಸಕ್ಕರೆ, ಉಪ್ಪು ಮತ್ತು ಸ್ಯಾಚುರೇಟೆಡ್ ಕೊಬ್ಬಿನ ಮಟ್ಟವು ‘ಎ ನಿಂದ ಈ’ ಶ್ರೇಣಿಯಲ್ಲಿ ಸ್ಪಷ್ಟವಾಗಿ ಕಾಣಿಸಬೇಕು. ಸಾರ್ವಜನಿಕರ ಆರೋಗ್ಯವನ್ನು ಕಂಪೆನಿಗಳ ಲಾಭಕ್ಕಾಗಿ ಬಲಿ ಕೊಡುವುದನ್ನು ಕೇಂದ್ರ ಸರ್ಕಾರ ತಕ್ಷಣವೇ ನಿಲ್ಲಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…