ಮೈಸೂರಿನ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ವಾರಾಂತ್ಯ ರಜೆಯ ಪ್ರವಾಸಕ್ಕೆಂದು ಮಂಗಳೂರಿಗೆ ತೆರಳಿದ್ದ ವೇಳೆ ತಾವು ತಂಗಿದ್ದ ಉಳ್ಳಾಲ ಸಮೀಪದ ವಾಸ್ಕೊ ರೆಸಾರ್ಟ್ ಈಜುಕೊಳದಲ್ಲಿ ಆಟವಾಡಲು ಹೋಗಿ ಈಜುಬಾರದೆ ಮುಳುಗಿ ಸಾವನ್ನಪ್ಪಿರುವುದು ಬೇಸರದ ಸಂಗತಿ.
ರೆಸಾರ್ಟ್ ನ ಈಜುಕೊಳದಲ್ಲಿ ಯಾವುದೇ ಸುರಕ್ಷತಾ ಪರಿಕರಗಳಿಲ್ಲದಿರುವುದು ಹಾಗೂ ರೆಸಾರ್ಟ್‌ನ ಯಾವ ಸಿಬ್ಬಂದಿಯೂ ಈಜುಕೊಳದ ಸಮೀಪ ಇಲ್ಲದಿರುವುದು ಇವರ ಸಾವಿಗೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ.
ನೀರಿನಲ್ಲಿ ಮುಳುಗುವ ವೇಳೆ ಈ ಯುವತಿಯರು ಸಹಾಯಕ್ಕಾಗಿ ಕೂಗಿಕೊಂಡರೂ ರೆಸಾರ್ಟ್‌ನ ಯಾವ ಸಿಬ್ಬಂದಿಯೂ ನೆರವಿಗೆ ಬಾರದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾವಿಗೆ ರೆಸಾರ್ಟ್‌ನಲ್ಲಿರುವ ಲೋಪಗಳೇ ಕಾರಣ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ.
ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ವೇಳೆ ರೆಸಾರ್ಟ್, ಮಾಲೀಕರು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಸದ್ಯ ರೆಸಾರ್ಟ್‌ಗೆ ಬೀಗ ಹಾಕಲಾಗಿದ್ದು, ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅನಧಿಕೃತ ರೆಸಾರ್ಟ್‌ಗಳ ಹಾವಳಿ ಮಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲ ಕಡೆಗಳಲ್ಲಿಯೂ ತಲೆ ಎತ್ತುತ್ತಿದ್ದು, ಇವುಗಳ ಬಗ್ಗೆ ಆಯಾ ಜಿಲ್ಲಾಡಳಿತ ಗಮನಹರಿಸಿ ಅನಧಿಕೃತ ರೆಸಾರ್ಟ್ ಗಳನ್ನು ತೆರವು ಮಾಡಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…
ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…
೨೨ ವಾರಗಳ ಗಾಂಧಿ ಅರಿವಿನ ಯಾನ ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ…
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…