ಓದುಗರ ಪತ್ರ
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ. ತಾಂತ್ರಿಕ ಮಾನದಂಡಗಳ ನೆಪದಲ್ಲಿ ಅರ್ಹ ಬಡ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿವೆ.
ಈಗಾಗಲೇ ಅನರ್ಹರ ಐದು ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಿರುವುದು ಶ್ಲಾಘನೀಯ. ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ರೂ. ಒಂದು ಲಕ್ಷದಿಂದ ಮೂರು ಲಕ್ಷಕ್ಕೆ ಹೆಚ್ಚಿಸಲು ಆಡಳಿತ ಸುಧಾರಣಾ ಆಯೋಗ ಮಾಡಿರುವ ಶಿಫಾರಸನ್ನು ಸರ್ಕಾರ ಅನುಷ್ಠಾನ ಮಾಡಬೇಕು. ಹಾಗೂ ಬಾಕಿ ಇರುವ ಬಿಪಿಎಲ್ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಬಡಜನರಿಗೆ ನ್ಯಾಯ ಒದಗಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…