Andolana originals

ಓದುಗರ ಪತ್ರ: ಬಿಜೆಪಿಯಲ್ಲಿ ಹೆಚ್ಚಿದ ಆಂತರಿಕ ಗೊಂದಲ

ನಮ್ಮದು ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಈಗ ರಾಜ್ಯದ ಮಟ್ಟಿಗಂತೂ ಒಡೆದ ಹೋಗಿರುವ ಮನೆಯಾಗಿದೆ. ಆಂತರಿಕವಾಗಿ ಎರಡು ಬಣಗಳಾಗಿ ಒಡೆದುಹೋಗಿರುವ ಬಿಜೆಪಿಯಲ್ಲಿ ಎರಡೂ ಬಣಗಳ ನಡುವಿನ ಮುಸುಕಿನ ಗುದ್ದಾಟ ರಾಜ್ಯದಲ್ಲಿ ಬಿಜೆಪಿ ವರ್ಚಸ್ಸಿಗೆ ಕುತ್ತು ತಂದಿದೆ.

ಈ ಎರಡೂ ಬಣಗಳ ಪ್ರಮುಖರು ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುವುದು ವಿರೋಧ ಪಕ್ಷಗಳಿಗೆ ಆಹಾರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರಂತೂ ಪಕ್ಷದ ಹೈಕಮಾಂಡ್‌ಗೂ ಡೋಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದು, ಇವರ ವರ್ತನೆಗೆ ಬ್ರೇಕ್ ಹಾಕಲು ಹೈಕಮಾಂಡ್ ವಿಫಲವಾಗಿದೆಯೇನೋ ಅನಿಸುತ್ತದೆ. ಇಲ್ಲವೇ ಹೈಕಮಾಂಡ್ ಪರೋಕ್ಷವಾಗಿ ಯತ್ನಾಳ್‌ರ ಬೆಂಬಲಕ್ಕೆ ನಿಂತಿರಬಹುದು ಎಂಬ ಅನುಮಾನ ಶುರುವಾಗಿದೆ.

ಯತ್ನಾಳ್ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿದ್ದು, ನಿಮ್ಮ ರಹಸ್ಯವನ್ನೆಲ್ಲ ಬಿಚ್ಚಿಡುತ್ತೇನೆ ಎಂಬ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಹೈಕಮಾಂಡ್ ಮಧ್ಯ ಪ್ರವೇಶಿಸಿ ಈ ಒಳ ಜಗಳವನ್ನು ತಣ್ಣಗಾಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಭಾರಿ ದಂಡ ತೆರಬೇಕಾಗುತ್ತದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

1 hour ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

2 hours ago