Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಓದುಗರ ಪತ್ರ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಬೆಳಗಿನ ವೇಳೆಯಲ್ಲಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ.

ಆ ಸಮಯದಲ್ಲೇ ಸರಗಳ್ಳತನ ನಡೆಯುವ ಸಾಧ್ಯತೆಗಳಿರುತ್ತವೆ. ಮೈಸೂರು ನಗರದ ಪ್ರಮುಖ ದೇವಸ್ಥಾನಗಳ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಧನುರ್ಮಾಸದಲ್ಲಿ ಬೆಳಗಿನ ವೇಳೆ ಪೊಲೀಸ್ ಗಸ್ತನ್ನು ಹೆಚ್ಚಿಸುವ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ ಮೈಸೂರು

Tags:
error: Content is protected !!