ಓದುಗರ ಪತ್ರ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದರು. ಇದೀಗ ಈ ಯೋಜನೆ ಜರಿಗೆ ಬಂದಿದೆ. ಆದರೆ ಸಾರಿಗೆ ನಿಗಮಗಳು ವಿದ್ಯಾರ್ಥಿ ಪಾಸ್ ವಿತರಿಸಲು ಹಾಲಿ ಅನುಸರಿಸುತ್ತಿರುವ ದೂರ ಮಿತಿಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಪ್ರಸ್ತುತ ವಿದ್ಯಾರ್ಥಿ ಪಾಸ್‌ನಲ್ಲಿ ೬೦ ಕಿಲೋಮೀಟರ್ ದೂರದ ಮಿತಿ ಇದೆ. ಆದರೆ ಹಲವಾರು ವಿದ್ಯಾರ್ಥಿಗಳು ೧೦೦ ಕಿಮೀಗಿಂತಲೂ ಹೆಚ್ಚಿನ ದೂರದಿಂದ ಶಾಲಾ ಕಾಲೇಜುಗಳಿಗೆ ಓಡಾಡುತ್ತಾರೆ. ಅವರೆಲ್ಲ ಪ್ರತಿದಿನ ತಮ್ಮ ತಮ್ಮ ಊರುಗಳಿಂದ ಹೋಗುವಾಗ ಮತ್ತು ಬರುವಾಗ ಪಾಸ್ ನಿಗದಿಯಾಗಿರುವ ಸ್ಥಳದವರೆಗೆ ಟಿಕೆಟ್ ಪಡೆದೇ ಹೋಗಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಆಗುತ್ತಿದೆ. ಹಾಗಾಗಿ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿ ಪಾಸ್ ನಲ್ಲಿರುವ ೬೦ ಕಿಲೋಮೀಟರ್ ದೂರದ ಮಿತಿಯನ್ನು ೧೦೦ ಕಿಲೋಮೀಟರ್‌ಗೆ ಹೆಚ್ಚಿಸಿ ಪ್ರಸಕ್ತ ಸಾಲಿನಿಂದಲೇ ಈ ಆದೇಶ ಜಾರಿಗೊಳಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ.
-ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…