ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು ಆಗಾಗ್ಗೆ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಇವರಿಗೆ ಸ್ಪಂದಿಸಿಲ್ಲ. ಸಂಬಂಧ ಪಟ್ಟವರು ಕೂಡಲೇ ಬಿಸಿಯೂಟ ಕಾರ್ಯಕರ್ತರಿಗೆ ಆಶಾ ಕಾರ್ಯಕರ್ತರ ಮಾದರಿಯಲ್ಲಿ ಗೌರವಧನವನ್ನು ಹೆಚ್ಚಳ ಮಾಡಲು ಕ್ರಮಕೈಗೊಳ್ಳ ಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ





