ಓದುಗರ ಪತ್ರ
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ ಮಾಧ್ಯಮವಾಗಿದೆ. ಕೇಂದ್ರ ಸರ್ಕಾರದ ಸ್ವಾಧೀನದಲ್ಲಿರುವ ಆಕಾಶವಾಣಿ ಮೈಸೂರು ಕೇಂದ್ರವು ಸದ್ಯ ೫ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. ಈಗ ೧೦ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಪ್ರಸಾರ ಭಾರತಿಯಿಂದ ಅನುಮತಿ ದೊರೆತಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಮೈಸೂರಿನ ಯಾದವ ಗಿರಿಯಲ್ಲಿರುವ ಆಕಾಶವಾಣಿ ಕೇಂದ್ರ ಕೇವಲ ೧೦೦ ಮೀಟರ್ ಎತ್ತರದಲ್ಲಿದೆ, ಇದನ್ನು ಯಾದವಗಿರಿಯಿಂದ, ೧೫೦ ಮೀಟರ್ ಎತ್ತರದ ಟವರ್ ಇರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸ್ಥಳಾಂತರಿಸಿದರೆ, ತಮಿಳು ನಾಡು ಮತ್ತು ಕೇರಳ ಗಡಿಭಾಗದ ಕನ್ನಡಿಗರು ಕೂಡ ಮೈಸೂರು ಆಕಾಶವಾಣಿಯ ಗುಣಮಟ್ಟದ ಕಾರ್ಯಕ್ರಮವನ್ನು ಕೇಳಬಹುದು.
ಭದ್ರಾವತಿ ಆಕಾಶವಾಣಿ ಕೇಂದ್ರದ ಪ್ರಸಾರ ಸಾಮರ್ಥ್ಯವನ್ನು ಇತ್ತೀಚೆಗೆ ಹೆಚ್ಚಳ ಮಾಡಿದ್ದು, ಇದೇ ಮಾದರಿಯಲ್ಲಿ ಮೈಸೂರು ಆಕಾಶವಾಣಿ ಕೇಂದ್ರದ ಸಾಮರ್ಥ್ಯವನ್ನೂ ಹೆಚ್ಚಿಸಲು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಕ್ರಮ ಕೈಗೊಳ್ಳುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…