ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಸಾರ್ವಜನಿಕರು ನ್ಯಾಯಾಂಗದ ಮೇಲೆ ಹೆಚ್ಚು ನಂಬಿಕೆ ಇಡುವಂತೆ ಮಾಡಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ನ್ಯಾಯ ಎಲ್ಲರಿಗೂ ಒಂದೇ ಎಂದು ಈ ಪ್ರಕರಣದಿಂದ ಸಾಬೀತಾ ದಂತಾಗಿದೆ.
ದಕ್ಷ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸಿದ್ದರಿಂದ ಆರೋಪಿಗೆ ಜೀವಾವಧಿ ಜೈಲು ಶಿಕ್ಷೆಯಾಗಿದೆ. ಇದು ಸತ್ಯಕ್ಕೆ ಮತ್ತು ನ್ಯಾಯಕ್ಕೆ ದೊರೆತ ಜಯ. ನ್ಯಾಯಾಲಯ ನೀಡಿರುವ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





